CONNECT WITH US  

ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ

ಬೆಂಗಳೂರು: ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರಾಜು ಭಾನುವಾರ ಕ್ಷೇತ್ರದ ವಿವಿಧೆಡೆ ಪಾದಯಾತ್ರೆ ನಡೆಸಿ ಮತಯಾಚನೆ ನಡೆಸಿದರು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜತೆಗೂಡಿ ಪಾದಯಾತ್ರೆ ನಡೆಸಿದರು.

ಮತ್ತೂಮ್ಮೆ ಆಶೀರ್ವಾದ ಮಾಡುವಂತೆ ಕೋರಿದರು. ಕಳೆದ ಹತ್ತು ವರ್ಷಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮಾದರಿಯನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಮತ್ತೂಮ್ಮೆ ಆವಕಾಶ ನೀಡಿದರೆ ನಿಮ್ಮ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.

ಕಳೆದ ಹತ್ತು ದಿನಗಳಿಂದ ಕ್ಷೇತ್ರದಲ್ಲಿ ಪಾದಯಾತ್ರೆ ಸಂದರ್ಭದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇತರೆ ಪಕ್ಷಗಳಿಂದ ಹಲವಾರು ಮುಖಂಡರು ಬಿಜೆಪಿ ಸೇರಿದ್ದಾರೆ. ಇದು ಪಕ್ಷಕ್ಕೆ ಶಕ್ತಿ ತಂದಿದೆ. ಕ್ಷೇತ್ರದಲ್ಲಿ ಕೈಗೊಂಡಿರುವ ಕಾರ್ಯಗಳಿಗೆ ಸಿಕ್ಕಿರುವ ಮನ್ನಣೆಯೂ ಹೌದು ಎಂದು ತಿಳಿಸಿದರು.

ಕ್ಷೇತ್ರದ ವ್ಯಾಪ್ತಿಗೆ ಬರುವ ಶೆಟ್ಟಿಹಳ್ಳಿ, ಮಲ್ಲಸಂದ್ರ, ಬಾಗಲಕುಂಟೆ, ಟಿ.ದಾಸರಹಳ್ಳಿ, ಚೊಕ್ಕಸಂದ್ರ, ಪೀಣ್ಯ ಕೈಗಾರಿಕೆ ಪ್ರದೇಶ, ರಾಜಗೋಪಾಲ ನಗರ,ಹೆಗ್ಗನಹಳ್ಳಿ ವಾರ್ಡ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಮುನಿರಾಜು ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು


ಇಂದು ಹೆಚ್ಚು ಓದಿದ್ದು

Trending videos

Back to Top