CONNECT WITH US  

ಜನ ಬಯಸಿದ ಸೌಲಭ್ಯ ನೀಡಿದ್ದೇನೆ

ಬೆಂಗಳೂರು: ವಿಜಯನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಕೃಷ್ಣಪ್ಪ ಭಾನುವಾರ ರೆಮೊ ಲೇ ಔಟ್‌ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜತೆಗೂಡಿ ಪಾದಯಾತ್ರೆ ನಡೆಸಿದ ಅವರು, ಕ್ಷೇತ್ರದ ಜನತೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದು ಮತ್ತೂಮ್ಮೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ 30.42 ಕೋಟಿ ರೂ. ವೆಚ್ಚದಲ್ಲಿ ಪಶ್ಚಿಮ ಕಾರ್ಡ್‌ ರಸ್ತೆ ಹಾಗೂ ಮೈಸೂರು ರಸ್ತೆ-ಮಾಗಡಿ ರಸ್ತೆಯಲ್ಲಿ ವೈಟ್‌ ಟಾಪಿಂಗ್‌ನಡಿ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು. ಹಂಪಿನಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಎ.ಸಿ.ರೀಡಿಂಗ್‌ ರೂಂ, ವೈಫೈ ವ್ಯವಸ್ಥೆ ಕಲ್ಪಿಸಲಾಗಿದೆ. ಉಮಿಯಾ ಭವನದ ಬಳಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಕೆಳ ಸೇತುವೆ ನಿರ್ಮಿಸಲಾಗಿದೆ.

ಶಾಸಕನಾಗಿ ಸರ್ಕಾರದಿಂದ ಪಡೆಯುವ ಸಂಬಳ ಹಾಗೂ ಇತರೆ ಭತ್ಯೆಗಳನ್ನು ಆಸ್ಪತ್ರೆಗಳಿಗೆ ದೇಣಿಗೆ ರೂಪದಲ್ಲಿ ನೀಡಿದ್ದೇನೆ ಎಂದು ತಿಳಿಸಿದರು. 37.13 ಕೋಟಿ ರೂ. ವೆಚ್ಚದಲ್ಲಿ ರಾಜಕಾಲುವೆಗೆ 33 ಕಡೆ ಆರ್‌ಸಿಸಿ ತಡೆಗೋಡೆ ನಿರ್ಮಿಸಲಾಗಿದೆ. ಗಾಳಿ ಆಂಜನೇಯ ದೇವಸ್ಥಾನಕ್ಕೆ ಆಗುತ್ತಿದ್ದ ತೊಂದರೆ ತಪ್ಪಿಸಲಾಗಿದೆ ಎಂದು ಹೇಳಿದರು.  


ಇಂದು ಹೆಚ್ಚು ಓದಿದ್ದು

Trending videos

Back to Top