CONNECT WITH US  

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮ

ಬೆಂಗಳೂರು: ಗೋವಿಂದರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಕೃಷ್ಣ ಭಾನುವಾರ ಮಾರುತಿ ಮಂದಿರ ವಾರ್ಡ್‌ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಕಾಂಗ್ರೆಸ್‌ನ ಪಾಲಿಕೆ ಸದಸ್ಯರು, ಕಾರ್ಯಕರ್ತರು ಹಾಗೂ ಮುಖಂಡರ ಜತೆಗೂಡಿ ಪಾದಯಾತ್ರೆ ನಡೆಸಿದ ಅವರು, ಮತ್ತೂಮ್ಮೆ ಆಶೀರ್ವಾದ ನೀಡುವಂತೆ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ್ದು, 65 ಕೋಟಿ ರೂ. ವೆಚ್ಚದಲ್ಲಿ 25  ಉದ್ಯಾನವನ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೆನೆ. ಕ್ಷೇತ್ರದ ವ್ಯಾಪ್ತಿಗೆ ಬರುವ ಟೋಲ್‌ಗೇಟ್‌ನಿಂದ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ವೆರೆಗೆ ಮೆಟ್ರೋ ಪಿಲ್ಲರ್‌ಗಳ ಸೌಂದರೀಕರಣಕ್ಕೆ ಯೋಜನೆ ರೂಪಿಸಲಾಗಿದೆ.

152 ಕೋಟಿ ರೂ. ವೆಚ್ಚದಲ್ಲಿ 69 ಕಿ.ಮೀ. ಉದ್ದದ ರಸ್ತೆ ಹಾಗೂ ಒಳಚರಂಡಿಗಳ ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳಿದರು. ಕ್ಷೇತ್ರದಲ್ಲಿ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು 58 ಆರ್‌ಓ ಘಟಜ, 270 ಹೊಸ ಕೊಳವೆ ಬಾವಿ ಮತ್ತು ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.  

ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು, 4 ಕೋಟಿ ರೂ. ವೆಚ್ಚದಲ್ಲಿ 400 ಕಡೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಪೊಲೀಸ್‌ ಠಾಣೆಗಳಿಗೆ ನೇರ ಸಂಪರ್ಕ ಕಲ್ಪಿಸಲಾಗಿದೆ. ಅಪರಾಧ ಪ್ರಕರಣ ನಿಯಂತ್ರಣ, ಸರಗಳ್ಳತನ ನಿಗ್ರಹಕ್ಕೆ  ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 


ಇಂದು ಹೆಚ್ಚು ಓದಿದ್ದು

Trending videos

Back to Top