CONNECT WITH US  

2 ವರ್ಷದ ಬಳಿಕ ಪ್ರಚಾರದ ಅಖಾಡಕ್ಕೆ ಸೋನಿಯಾ ಗಾಂಧಿ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರಮೋದಿ, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿ ಘಟಾನುಘಟಿ ನಾಯಕರು ಪ್ರಚಾರ ಕೈಗೊಳ್ಳಲಿದ್ದಾರೆ.

ವಿಧಾನಸಭೆ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡ ನಂತರ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಸೋನಿಯ ಗಾಂಧಿ ಎರಡು ವರ್ಷಗಳ ನಂತರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜಯಪುರ ದಲ್ಲಿ ಬಿಎಲ್‌ಡಿ  ನ್ಯೂ ಕ್ಯಾಂಪಸ್‌ ಗ್ರೌಂಡ್‌ನ‌ಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ಪ್ರಧಾನಿ ಮೋದಿ ಸಹ ಬೆಳಗ್ಗೆ ವಿಜಯಪುರ ದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ನಂತರ ಅವರು ಕೊಪ್ಪಳದಲ್ಲಿ ಪ್ರಚಾರ ಸಭೆ ನಡೆಸಿ ಸಂಜೆ ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮಂಗಳವಾರ ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ರೋಡ್‌ ಶೋ ನಡೆಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಪಕ್ಷದ ಅಭ್ಯರ್ಥಿಗಳ ಪರವಾಗಿ ರೋಡ್‌ ಶೋ ನಡೆಸಲಿದ್ದಾರೆ.


ಇಂದು ಹೆಚ್ಚು ಓದಿದ್ದು

Trending videos

Back to Top