CONNECT WITH US  

ಬಿಜೆಪಿಗೆ ಬಹುಮತ, 17ರಂದು ನಾನೇ ಸಿಎಂ

ವಿಜಯಪುರ: "ಪ್ರಸಕ್ತ ಚುನಾವಣೆಯಲ್ಲಿ 20 ಸ್ಥಾನವನ್ನೂ ಗೆಲ್ಲದ ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಕನಸು ಕಾಣುತ್ತಿದೆ. ಆದರೆ ಬಿಜೆಪಿ 150 ಸ್ಥಾನ ಗೆದ್ದು ಸ್ಪಷ್ಟ ಬಹುಮತ ಪಡೆಯುವ ಕಾರಣ ಮೇ 17ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ಮಹದಾಯಿ ಸಮಸ್ಯೆಗೆ 10 ದಿನಗಳಲ್ಲಿ ಪರಿಹಾರ ಕಂಡುಕೊಳ್ಳುತ್ತೇನೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾತನಾಡಿದ ಅವರು, ಮಹದಾಯಿ ಕಾಂಗ್ರೆಸ್‌ ಸರ್ಕಾರದ ಪಾಪದ ಕೂಸು. ಕಾಂಗ್ರೆಸ್‌ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಗೋವಾ ರಾಜ್ಯದ ಚುನಾವಣೆಯಲ್ಲಿ ಮಹದಾಯಿ ಹನಿ ನೀರು ಕರ್ನಾಟಕಕ್ಕೆ ಕೊಡುವುದಿಲ್ಲ ಎಂದು ಹೇಳಿದ್ದೇ ವಿವಾದಕ್ಕೆ ಪ್ರಮುಖ ಕಾರಣ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬರುತ್ತಲೇ ಪ್ರಧಾನಿ ಮೋದಿ ಅವರ ಮನವೊಲಿಸಿ ಮಹದಾಯಿ ಫಲಾನು ಭವಿ ರಾಜ್ಯಗಳ ಸಿಎಂ ಸಭೆ ಕರೆದು, ನ್ಯಾಯಾ ಧಿಕರಣಕ್ಕೆ ಪ್ರಮಾಣಪತ್ರ ಸಲ್ಲಿಸಿ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥ ಮಾಡುತ್ತೇವೆ ಎಂದರು.

ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೈಸೂರು ಭಾಗದಲ್ಲಿ ಜನರು ಪ್ರಚಾರಕ್ಕೆ ತಡೆಯೊಡ್ಡಿದ್ದಾರೆ. ಕಾಂಗ್ರೆಸ್‌ ಮುಖಂಡರಾದ ಖರ್ಗೆ, ಸಿದ್ದರಾಮಯ್ಯ, ಡಾ.ಪರಮೇಶ್ವರ್‌ ಒಬ್ಬರನ್ನೊಬ್ಬರು ಕಂಡರೆ ಆಗದ ಸ್ಥಿತಿ ಇರುವ ಕಾರಣ ಎಲ್ಲರೂ ಸೇರಿ ಒಂದೇ ವೇದಿಕೆಯಲ್ಲಿ ಪ್ರಚಾರ ಮಾಡುತ್ತಿಲ್ಲ ಎಂದರು.


ಇಂದು ಹೆಚ್ಚು ಓದಿದ್ದು

Trending videos

Back to Top