CONNECT WITH US  

ಬಿಜೆಪಿ ನಾಯಕನ ಕಿರುಕುಳ ಪ್ರತಿಭಟಿಸಿ ಕೇಶಮುಂಡನ

ಲಕ್ನೊ: ಬಿಜೆಪಿ ನಾಯಕ, ಹಿರಿಯ ವಕೀಲ ಸತೀಶ್‌ ಶರ್ಮಾ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದು, 3 ವರ್ಷಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ವಕೀಲೆಯೊಬ್ಬರು ಸುದ್ದಿಗೋಷ್ಠಿಯಲ್ಲೇ ಪ್ರತಿಭಟನಾರ್ಥವಾಗಿ ತಲೆ ಬೋಳಿಸಿ ಕೊಂಡಿದ್ದಾರೆ. ಶರ್ಮಾ ಅಶ್ಲೀಲ ರೀತಿಯಲ್ಲಿ ತಮ್ಮ ವಿಡಿಯೋ ಚಿತ್ರೀಕರಿಸಿಕೊಂಡು, ಬೆದರಿಕೆ ಒಡ್ಡುತ್ತಿದ್ದಾರೆ ಎಂದೂ ಆರೋ ಪಿಸಿದ್ದಾರೆ. ಪೊಲೀಸ್‌ ಠಾಣೆಯಲ್ಲಿ ದೂರು ನೀಡಲು ಹೋದಾಗ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಶರ್ಮಾ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಆತ್ಮಹತ್ಯೆಗೆ ಶರಣಾಗುವುದಾಗಿ ಹೇಳಿದ್ದಾರೆ. ನಮ್ಮ ಕುಟುಂಬಕ್ಕೂ ಬೆದರಿಕೆ ಒಡ್ಡುತ್ತಿದ್ದಾರೆ. ನಾನು ದಲಿತಳೆಂದು ಇಷ್ಟೆಲ್ಲಾ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.


ಇಂದು ಹೆಚ್ಚು ಓದಿದ್ದು

Trending videos

Back to Top