CONNECT WITH US  

ದಾಖಲೆಯಿಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿ ಹಣ ವಶ 

ತುಮಕೂರು : ದಾಖಲೆ ಇಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿಗೂ ಅಧಿಕ ಹಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದಲ್ಲಿ ರವಿವಾರ ತಡರಾತ್ರಿ ನಡೆದಿದೆ. 

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕ್ಯಾತ್ಸಂದ್ರ  ಪೊಲೀಸರು ರವಿವಾರ ತಡರಾತ್ರಿ ಸುಮಾರು 1.30ರ ವೇಳೆಗೆ  ಕಾರ್ಯಾಚರಣೆ ನಡೆಸಿದ್ದು ಸುಮಾರು 3 ಕೋಟಿ. ರೂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಈ ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.   


ಇಂದು ಹೆಚ್ಚು ಓದಿದ್ದು

Trending videos

Back to Top