CONNECT WITH US  

ದಕ್ಷಿಣ ಕನ್ನಡ: ಮಿಥುನ್ ರೈಗೆ ಕಾಂಗ್ರೆಸ್ ಟಿಕೆಟ್

ಮಂಗಳೂರು: ಲೋಕಸಭಾ ಚುಣಾವಣೆಗೆ ಕಾಂಗ್ರೆಸ್ ಕೊನೆಗೂ ತನ್ನ ಟಿಕೆಟ್ ಬಿಡುಗಡೆ ಮಾಡಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪಾಲಾಗಿದೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಹಲವಾರು ಹಿರಿಯ ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಮಾಜಿ ಸಚಿವ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ವಕ್ತಾರ ಬಿ.ಕೆ.ಹರಿಪ್ರಸಾದ್ ಮುಂತಾದವರ ಹೆಸರು ಕೂಡಾ ಹೈಕಮಾಂಡ್ ಸಭೆಯಲ್ಲಿ ಕೇಳಿಬಂದಿತ್ತು.

ಕೊನೆಗೂ ಕೈ ಹೈಕಮಾಂಡ್ ಅಳೆದು ತೂಗಿ ಶನಿವಾರ ತಡರಾತ್ರಿ ಪಟ್ಟಿ ಬಿಡುಗಡೆ ಮಾಡಿದ್ದು, ಯುವ ನಾಯಕ ಮಿಥುನ್ ರೈ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಮೊದಲ ಬಾರಿಗೆ ಲೋಕಸಭಾ ಟಿಕೆಟ್ ಪಡೆದ ಮಿಥುನ್ ರೈ ಗೆ ಎದುರಾಳಿಯಾಗಿ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.


ಇಂದು ಹೆಚ್ಚು ಓದಿದ್ದು

Trending videos

Back to Top